ಬಳ್ಳಾರಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಆಕ್ಸಿಜನ್ ಟ್ಯಾಂಕರ್ ಆಕ್ಸಿಡೆಂಟ್

ಅದೃಷ್ಟವಶಾತ್ ಸೋರಿಕೆ ಆಗಲಿಲ್ಲ ಆಕ್ಸಿಜನ್

 | 
Oxygen Tanker accident

ಬಳ್ಳಾರಿಯಿಂದ ಆಕ್ಸಿಜನ್ ಲಿಕ್ವಿಡ್ ಹೊತ್ತುಕೊಂಡು ಬೆಳಗಾವಿ ಕಡೆಗೆ ಬರುತ್ತಿದ್ದ ಆಕ್ಸಿಜನ್ ಟ್ಯಾಂಕರ್ ಅಪಘಾತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಮುತ್ನಾಳ್ ಗ್ರಾಮದ ಬಳಿ ಸಂಭವಿಸಿದ್ದು. ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಆಕ್ಸಿಜನ್ ಸೋರಿಕೆಯಾಗಿಲ್ಲ.

ಇಂದು ಬೆಳಗಿನ ಜಾವ ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಈ ಘಟನೆ ಸಂಭವಿಸಿದೆ. ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಮುಂಬದಿಯ ಲಾರಿಗೆ ಆಕ್ಸಿಜನ್ ಟ್ಯಾಂಕರ್ ಡಿಕ್ಕಿ ಹೊಡಿದಿದ್ದು, ಅದೃಷ್ಟವಶಾತ್ ಅಪಘಾತದ ವೇಳೆ ಆಕ್ಸಿಜನ್ ಲಿಕ್ವಿಡ್ ಟ್ಯಾಂಕ್‍ಗೆ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ.

ದರೆ, ಡಿಕ್ಕಿ ಹೊಡೆದ ರಭಸಕ್ಕೆ ಟ್ಯಾಂಕರ್‍ ನ ಟಯರ್ ಬ್ಲಾಸ್ಟ್ ಆಗಿ ಎಕ್ಸಲ್ ಕಟ್ ಆಗಿರುವ ಹಿನ್ನೆಲೆ ಬೇರೆ ಆಕ್ಸಿಜನ್ ಟ್ಯಾಂಕರ್ ತರಿಸಿ ಆಕ್ಸಿಜನ್ ಲಿಕ್ವಿಡ್ ಶಿಫ್ಟ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಯಿತು. ಈ ಟ್ಯಾಂಕರ್ 16 ಕೆಎಲ್ ಸಾಮಥ್ರ್ಯದ ಆಕ್ಸಿಜನ್ ಲಿಕ್ವಿಡ್ ಹೊಂದಿದೆ. ಈ ಘಟನೆಯು ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.