ಕೇರಳದ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಪ್ರಮಾಣವಚನ ಸ್ವೀಕಾರ

ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪಿಣರಾಯಿ ವಿಜಯನ್

 | 
Pinarayi vijayan taking a oath

ತಿರುವನಂತಪುರಂ: ಕೆರಳ ವಿಧಾನಸಭೆಯಲ್ಲಿ ಅಭೂತಪೂರ್ವ ಜಯ ಸಾಧಿಸಿ ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಪಿಣರಾಯಿ ವಿಜಯನ್ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾನವಚನ ಸ್ವೀಕರಿಸಿದರು.

ತಿರುವನಂತಪುರಂ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಿಣರಾಯಿ ವಿಜಯನ್ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಬಕ್ಕೆ ಕೇವಲ 500 ಜನರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

ಪ್ರಮಾಣ ವಚನ ಸ್ವೀಕರಿಸುವ ಮುನ್ನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಯಲಾರ್ ಹುತಾತ್ಮರ ಸಭಾಂಗಣ ಮತ್ತು ಅಲಪ್ಪುಳದಲ್ಲಿರುವ ಪುಸ್ನಾಪ್ರ ವಯಲಾರ್ ಹುತಾತ್ಮರ ಸ್ಮಾರಕಕ್ಕೆ ಮಾಲರ್ಪಣೆ ಮಾಡಿದರು. ಈ ಕಾರ್ಯಕ್ರಮಕ್ಕೆ ಯುಡಿಎಫ್ ಶಾಸಕರು ಮತ್ತು ಮುಖಂಡರುಗಳು ಭಾಗವಹಿಸಲಿಲ್ಲ.