‘ಪೆಟ್ರೋಲ್ 100 ನಾಟ್ ಔಟ್’ ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
 | 
Congress protest in petrol bank

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇಂಧನ ದರ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗ 100-ನಾಟೌಟ್ ಹೆಸರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಆರ್.ವಿ ದೇಶಪಾಂಡೆ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಭಾಗವಹಿಸಿದ್ದರು.