ವಿಡಿಯೋದಲ್ಲಿರುವುದು ನಾನೇ, ಅದು ಸಹಮತದ ಲೈಂಗಿಕ ಸಂಪರ್ಕ: ರಮೇಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ತಿರುವು

 | 
Ramesh jarakiholi and CD lady

ಬೆಂಗಳೂರು: ಬೆಳಗಾವಿ ಬಿಜೆಪಿ ಶಾಸಕ ಸಾಹುಕಾರ್ ರಮೇಶ್ ಜಾರಿಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ತಿರುವು ಪಡೆದುಕೊಂಡಿದೆ. ಆರಂಭದಿಂದ ವಿಡಿಯೋದಲ್ಲಿರುವುದು ನಾನಲ್ಲ ನಾನಲ್ಲ ಎಂದುಕೊಂಡೆ ಬಂದಿದ್ದ ರಮೇಶ್ ಜಾರಕಿಹೊಳಿ ಇದೀಗ ಉಲ್ಟಾ ಹೊಡೆದಿದ್ದಾರೆ. ವಿಡಿಯೋದಲ್ಲಿರುವುದು ನಾನೇ. ಆದರೆ ಆ ಯುವತಿಯೊಂದಿಗೆ ಸಹಮತದ ಲೈಂಗಿಕ ಸಂಪರ್ಕ ನಡೆಸಿದ್ದೆ ಎಂದು ಹೇಳಿಕೆ ನೀಡಿದ್ದಾರೆ.

ಕೆಲಸದ ಆಮಿಷವೊಡ್ಡಿ ಸಚಿವರು ನನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರರಣದ ತನಿಖೆಯನ್ನು ತನಿಖಾಧಿಕಾರಿ ಎಂ.ಸಿ ಕವಿತಾ ಅವರು ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಹಾಗೆ ವೈದ್ಯಕೀಯ ಪರೀಕ್ಷೆಗೂ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ನಾನು ಸಚಿವನಾಗಿದ್ದಾಗ ಒಂದು ಪ್ರಾಜೆಕ್ಟ್ ವಿಚಾರವಾಗಿ ಯುವತಿ ನನ್ನನ್ನು ಭೇಟಿ ಮಾಡಿದ್ದಳು. ಆಕೆಯೊಂದಿಗೆ ಸಂಪರ್ಕದಲ್ಲಿ ಇದ್ದದ್ದು ನಿಜ. ಆದರೆ, ನನಗೆ ಗೊತ್ತಿಲ್ಲದಂತೆ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕಾಣದ ಕೈಗಳು ಷಡ್ಯಂತ್ರ ರೂಪಿಸಿ, ಹನಿಟ್ರ್ಯಾಪ್ ಗೆ ಬೀಳಿಸಿದ್ದಾರೆ. ತಮ್ಮ ಹೆಸರಿಗೆ ಕಳಂಕ ತಂದು ರಾಜಕೀಯವಾಗಿ ನನ್ನನ್ನು ಮುಗಿಸುವ ಉದ್ದೇಶ ಇದರ ಹಿಂದಿದೆ ಎಂದು ಅವರು ತನಿಖಾಧಿಕಾರಿ ಮುಂದೆ ಹೇಳಿಕೊಂಡಿದ್ದಾರೆ.

ಸಹಮತದ ಲೈಂಗಿಕ ಸಂಪರ್ಕವನ್ನೇ ಅತ್ಯಾಚಾರವೆಂದು ಬಿಂಬಿಸಲು ಹೊರಟಿರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ 
ಕೈಗೊಳ್ಳಬೇಕೆಂದು ರಮೇಶ್ ಜಾರಕಿಹೊಳಿ ಹೇಳಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಹೇಳಿಕೆ ಬಗ್ಗೆ ಪ್ರತಿಕ್ರೆಯೆ ನೀಡಿರುವ ಎಸ್ಐಟಿ ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಈ ಹಂತದಲ್ಲಿ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲಾಗದು ಎಂದು ಹೇಳಿದ್ದಾರೆ.