ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಿಡಿ

ಕೋವಿಡ್ ಎರಡನೇ ಅಲೆ ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲ

 | 
satish jarakiholi

ಬೆಳಗಾವಿ: ಸೂಕ್ತ ವೈದ್ಯಕೀಯ ಸೌಲಭ್ಯ ಸಿಗದೇ ರಾಜ್ಯದ ಜನ ಬಸವಳಿದ್ದಾರೆ, ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಪ್ರತಿದಿನ ಎಷ್ಟು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಬಗ್ಗೆ ಸರ್ಕಾರದ ಬಳಿ ಸೂಕ್ತ ಮಾಹಿತಿಯಿಲ್ಲ, ಸರ್ಕಾರಕ್ಕೆ ಅದರ ಅರಿವು ಇಲ್ಲ ಎಂದು ಕಿಡಿಕಾರಿದ್ದಾರೆ.

ಸರ್ಕಾರದ ನಿರ್ಲಕ್ಷ್ಯ ಹಾಗೂ ಸೂಕ್ತ ವೈದ್ಯಕೀಯ ಸೌಲಭ್ಯ ಸಿಗದೇ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಎರಡನೇ ಅಲೆಯ ಬಗ್ಗೆ ತಜ್ಞರು ಮತ್ತು ವಿರೋಧ ಪಕ್ಷದ ನಾಯಕರು ನೀಡಿದ ಎಚ್ಚರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ಆಕ್ರೋಶ ಶತೀಶ್ ಜಾರಕಿಹೊಳಿ ವ್ಯಕ್ತಪಡಿಸಿದ್ದಾರೆ.