ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಂದು ಕೊಂಚ ಹೆಚ್ಚಳ

ಸತತ ಎರಡನೇ ದಿನವೂ ಒಂದು ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆ

 | 
Representative Image

ನವದೆಹಲಿ: ಭಾರತದಲ್ಲಿ ಸತತ ಎರಡನೇ ದಿನವೂ ಒಂದು ಲಕ್ಷಕ್ಕಿಂತ ಕಡಿಮೆ ಸಂಖ್ಯೆಯ ದೈನಂದಿನ ಪ್ರಕರಣಗಳು ಪತ್ತೆಯಾಗಿವೆ. ಆದರೆ ನಿನ್ನೆಗಿಂತಲೂ ಇಂದು ಸೋಂಕಿತರ ಸಂಖ್ಯೆ ಹೆಚ್ಚು ಕಾಣಿಸಿಕೊಂಡಿವೆ. ನಿನ್ನೆ 86,498 ಪ್ರಕರಣಗಳು ಪತ್ತೆಯಾಗಿದ್ದವು. 2123 ಜನರು ಸೋಂಕಿಗೆ ಬಲಿಯಾಗಿದ್ದರು. ಆದರೆ, ಕಳೆದ 24 ಗಂಟೆಯಲ್ಲಿ 92,596 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 2,219 ಮಂದಿ ಸಾವನ್ನಪ್ಪಿದ್ದಾರೆ

ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 12,31,415 ಇದ್ದು, ಸೋಂಕಿತರ ಸಂಖ್ಯೆ 2,90,89,069ಕ್ಕೆ ತಲುಪಿದೆ, ಸಾವಿನ ಸಂಖ್ಯೆ 3,53,528ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,62,664 ಮಂದಿ ಗುಣಮುಖರಾಗಿದ್ದು, ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 2,75,04,126ಕ್ಕೆ ತಲುಪಿದೆ.

ತಮಿಳುನಾಡು, ಕೇರಳ, ಮಹಾರಾಷ್ಟ್ರ, ಕರ್ನಾಟಕ, ಮತ್ತು ಆಂಧ್ರಪ್ರದೇಶದ ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದಾರೆ