ಜುಲೈ 19 ಮತ್ತು 22 ನೇ ತಾರೀಖಿನಂದು ಎಸ್ಎಸ್ಎಲ್ ಸಿ ಪರೀಕ್ಷೆ
ವೇಳಾಪಟ್ಟಿ ಪ್ರಕಟಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಗಳು ಜುಲೈ 19 ಮತ್ತು 22 ನೇ ತಾರೀಖಿನಂದ ನಡೆಯಲಿವೆ ಎಂದು ಪ್ರಾಥಾಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಸುರೇಶ್ ಕುಮಾರ್. ಜುಲೈ 19ರಂದು ಗಣಿತ, ವಿಜ್ಞಾನ ಹಾಗೂ ಸಮಾಜವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ, ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ ಎಂದು ಎಸ್ಎಸ್ಎಲ್ ಸಿ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು.
ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗಲಿದ್ದು, ಇದಕ್ಕಾಗಿ 7,306 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕಷಾ ಕೇಂದ್ರ ಗಳು ಮಕ್ಕಳ ಸುರಕ್ಷಾ ಕೇಂದ್ರಗಳಾಗಿದ್ದು, ಪರೀಕ್ಷೆಗೆ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಎಸ್ಎಸ್ಎಲ್ ಸಿ ಪರೀಕ್ಷೆಯ ಪೂರ್ವ ಸಿದ್ಧತೆಯನ್ನು ಅವಲೋಕಿಸಿದರು. ಹಾಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ವಿಡಿಯೋ ಸಂವಾದದ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಹಾಗೆ ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ಜುಲೈ ಎರಡನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.