ಮಕ್ಕಳ ಆರೈಕೆ ಕೇಂದ್ರ ಆರಂಭಿಸಲು ರಾಜ್ಯ ಸರ್ಕಾರದ ನಿರ್ಧಾರ: ಆರ್ ಅಶೋಕ್

ಕೋವಿಡ್ ಮೂರನೇ ಅಲೆ ನಿರಂತ್ರಿಸಲು ಎಲ್ಲಾ ಜಿಲ್ಲೆಗಳಲ್ಲೂ ಸ್ಥಾಪನೆ

 | 
ಮಕ್ಕಳ ಆರೈಕೆ ಕೇಂದ್ರ ಆರಂಭಿಸಲು ರಾಜ್ಯ ಸರ್ಕಾರದ ನಿರ್ಧಾರ: ಆರ್ ಅಶೋಕ್

ಬೆಂಗಳೂರು: ಕೋವಿಡ್ ಎರಡನೇ ಅಲೆಯಿಂದ ಹೈರಾಣಾಗಿರುವ ರಾಜ್ಯ ಸರ್ಕಾರ ಮೂರನೇ ಅಲೆಯನ್ನು ನಿಯಂತ್ರಿಸಲು ಮುಂದಡಿಯಿಟ್ಟಿದೆ. ಈ ಹಿನ್ನೆಲೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಕ್ಕಳಿಗಾಗಿ ಪ್ರತ್ಯೇಕ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ ಮೂರನೆ ಅಲೆಯನ್ನು ನಿಯಂತ್ರಿಸಲು ನಾವು ಈಗಲೇ ಸಿದ್ಧತೆ ಮಾಡಕೊಳ್ಳಲಾಗುವುದು ಎಂದಿದ್ದಾರೆ.

ಎಲ್ಲಾ ಜಿಲ್ಲೆಯಲ್ಲೂ ಆಸ್ಪತ್ರೆಗಳ ಆವರಣದಲ್ಲಿ ಮಕ್ಕಳಿಗಾಗಿ ಕೋವಿಡ್ ಆರೈಕೆ ಕೇಂದ್ರಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದ ಹೇಳಿದ ಅವರು ಇನ್ನು ಮೂರು ಅಥವಾ ನಾಲ್ಕು ದಿನಗಳಲ್ಲಿ ಇದರ ಕಾರ್ಯಪಡೆ ರಚನೆಯಾಗಲಿದೆ ಎಂದು ತಿಳಿಸಿದ್ದಾರೆ.