ಕೋವಿಡ್ ನಿರ್ವಹಣೆಗಾಗಿ ಪ್ರತಿ ಗ್ರಾಮ ಪಂಚಾಯ್ತಿಗೆ 50ಸಾವಿರ: ಸುಧಾಕರ್

ಮನೆಗಳಿಗೆ ತೆರಳಿ ಸೋಂಕಿತರನ್ನು ಕೋವಿಡ್ ಕೇರ್ ಗೆ ಸಾಗಿಸಲು ಅನುಕೂಲ

 | 
D. K sudhakar

ಬೆಂಗಳೂರು: ಕೋವಿಡ್ ಎರಡನೇ ಅಲೆಯಿಂದ ಈಗ ರಾಜ್ಯದ ಹಳ್ಳಿಗಳು ತತ್ತರಿಸುತ್ತಿವೆ ಈ ಹಿನ್ನೆಲೆ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸಲು ಪ್ರತಿ ಗ್ರಾಮ ಪಂಚಾಯ್ತಿಗಳಿಗೆ 50 ಸಾವಿರ ಹಣ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನ್ಲಲ್ಲಿ ಈ ಕುರಿತು ಮಾತನಾಡಿದ ಅವರು, ಇತ್ತೀಚೆಗೆ ಹಳ್ಳಿಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದ್ದು, ಈ ಹಣ ಹಳ್ಳಿಗಳಲ್ಲಿ ಸೋಂಕಿತರ ಮನೆಗಳಿಗೆ ತೆರಳಿ ಸೋಂಕಿತರನ್ನು ಕೋವಿಡ್ ಕೇರ್ ಗೆ ಸಾಗಿಸಲು ಬಳಸಲು ಸ್ಥಳೀಯ ಮಟ್ಟದ ಕಾರ್ಯಪಡೆಗೆ ಅನುಕೂಲವಾಗಲಿದೆ ಎಂದರು.

ಕೇಂದ್ರದಿಂದ 800 ಆಕ್ಸಿಜನ್ ಕಾನ್ಸೆಂಟ್ರೇಟರ್ ಗಳು ಬಂದಿದ್ದು, ಅವುಗಳನ್ನು ಕೋವಿಡ್ ಸೋಂಕು ಹೆಚ್ಚುತ್ತಿರುವ ಕಡೆಗಳಿಗೆ ತಲಾ 25 ಆಕ್ಸಿಜನ ಕಾನ್ಸೆಂಟ್ರೇಟರ್ಗಳನ್ನು ಕಳುಹಿಸಲಾಗುವುದು, ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯು ವ್ಯವಸ್ಥೆ, ಆಕ್ಸಿಜನ ಸೇರಿದಂತೆ ಹೆಚ್ಚಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಬ್ಲಾಕ್ ಫಂಗಸ್ ರೋಗಕ್ಕೆ ಔಷಧಿ ವಿತರಿಸಲಾಗುತ್ತಿದೆ, ಹೆಚ್ಚಿನ ಪ್ರಮಾಣದ ಔಷಧಿಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೋವಿಡ್ ನಿಂದ ಗುಣಮುಖರಾದವರು ಆರೋಗ್ಯದ ಮೇಲೆ ತೀವ್ರ ನಿಗಾ ಇಡಬೇಕೆಂದು ಸೂಚಿಸಲಾಗುತ್ತಿದೆ ಎಂದು ಸುಧಾಕರ್ ತಿಳಿಸಿದ್ದಾರೆ.