ರಾಜ್ಯದಲ್ಲಿ 6 ಜೀನೋಮ್ ಲ್ಯಾಬ್ ಸ್ಥಾಪನೆಗೆ ನಿರ್ಧಾರ: ಸುಧಾಕರ್

 | 

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಆರು ಜೀನೋಮ್ ಲ್ಯಾಬ್ ಗಳನ್ನು ಸ್ಥಾಪಿಸಲು ನಿರ್ಧಾರ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸುಧಾಕರ್, ಡೆಲ್ಟಾ ಪ್ಲಸ್ ರೂಫಾಂತರಿ ವೈರಸ್  ಸೊಂಕಿತ ರೋಗಿಯನ್ನು ಐಸೋಲೇಟ್ ಮಾಡಲಾಗಿದೆ. ಆದರೆ ರೋಗಿಗೆ ಯಾವುದೇ ರೋಗದ ಲಕ್ಷಣಗಳಿಲ್ಲ ಹಾಗೂ ಆತನ ಪ್ರಾಥಾಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಇರುವವರಿಗೆ ಸೋಂಕ ಹರಡಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಗೆ ಸೂಕ್ಷ್ಮವಾಗಿ ನಿರಂತರ ಗಮನ ಹರಿಲಾಗುತ್ತಿದ್ದು, ರಾಜ್ಯಾದ್ಯಂತ ಆರು ಜೀನೋಮ್ ಲ್ಯಾಬ್ ಗಳನ್ನು ತೆರೆಯಲು ನಿರ್ಧಾರಿಸಲಾಗಿದೆ ಎಂದು ಹೇಳಿದ್ದಾರೆ.