ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕ
ರಾಷ್ಟ್ರಪತಿಗಳಿಂದ ನೇಮಕ ಮಾಡಿ ಆದೇಶ
Jul 6, 2021, 13:34 IST
| ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ಓಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದ ತಾವರ್‌ಚಂದ್ ಗೆಹ್ಲೋಟ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೇಮಕ ಮಾಡಿ ಆದೇಶ ನೀಡಿದ್ದಾರೆ.
ಹಾಲಿ ರಾಜ್ಯಪಾಲರಾದ ವಜುಭಾಯಿ ವಾಲ ಅವರ ಅವಧಿ ಪೂರ್ಣಗೊಂಡಿದ್ದು, ಈ ಹಿನ್ನೆಲೆ ತಾವರ್‌ಚಂದ್ ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳುವ ಮೂಲಕ ವಜುಬಾಯಿ ವಾಲಾ ಅವರ ಸ್ಥಾನವನ್ನು ತುಂಬಲಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.