ಲಾಕ್​ಡೌನ್ ಬಗ್ಗೆ ನಾಳೆ ತೀರ್ಮಾನ ಮಾಡಲಾಗುವುದು: ಸಿಎಂ ಯಡಿಯೂರಪ್ಪ

ಎರಡು ಮೂರು ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ

 | 
BS Yediyurappa

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ಬಗ್ಗೆ ನಾಳೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಇಂದು ಸಂಜೆ ಹಿರಿಯ ಅಧಿಕಾರಿಗಳ ಜೊತೆ ಲಾಕ್ ಡೌನ್ ಕುರಿತು ಚರ್ಚೆ ಮಾಡಲಾಗುತ್ತದೆ. ಲಾಕ್​ಡೌನ್​ನಲ್ಲಿ ವಿಸ್ತರಣೆ ಮಾಡಿ ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

ಲಾಕ್​ಡೌನ್​ನಿಂದಾಗಿ ಅನೇಕ ಸಮುದಾಯಗಳು, ಕೂಲಿ-ಕಾರ್ಮಿಕರಿಗೆ ತೊಂದರೆ ಉಂಟಾಗಿದ್ದು, ಎರಡು ಮೂರು ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲಾಗುವುದು, ಹಾಗೆ ಮತ್ತಷ್ಟು ವಲಯಗಳಿಗೆ ವಿನಾಯ್ತಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ನಾಳೆಯಿಂದ ಕೈಗಾರಿಕೆಗಳ ರಫ್ತು ಘಟಕಗಳಿಗೆ ಅನುಮತಿ ನೀಡಲಾಗುವುದು. ರಫ್ತಿಗೆ ಸಂಬಂಧಿಸಿದ ಕೆಲಸಗಳು ನಾಳೆಯಿಂದಲೇ ಆರಂಭವಾಗಲಿವೆ. ಕೈಗಾರಿಕೆಗಳಿಗೆ ಸಂಬಂಧಿಸಿದ ಕೆಲವು ವಲಯಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸದ್ಯ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ, ಆದರೆ ಹಳ್ಳಿಗಳಲ್ಲಿ ಕೊರೋನಾ ಸೋಂಕು ಇನ್ನು ತಹಬದಿಗೆ ಬಂದಿಲ್ಲ, ಹಳ್ಳಿಗಳಲ್ಲಿ ಸೋಂಕು ಹರಡುವ ಸಾದ್ಯತೆ ಇದೆ ಎಂದು ತಜ್ಞರು ಹೇಳಿರುವ ಹಿನ್ನೆಲೆ ಇಂದು ನಡೆಯುವ ಸಭೆಯಲ್ಲಿ ಲಾಕ್ ಡೌನ್ ಮಾಡಬೇಕಾ ಅಥವಾ ಬೇಡವಾ ಎಂದು ಸರ್ಕಾರ ನಿರ್ಧರಿಸಲಿದೆ.