ಪ್ಯಾಟ್ ಕಮ್ಮಿನ್ಸ್, ಸಚಿನ್ ತೆಂಡೂಲ್ಕರ್ ಹಾದಿಯನ್ನೇ ಹಿಡಿದ ಕೊಹ್ಲಿ

ಕೊರೋನಾ ಪರಿಹಾರ ಕಾರ್ಯಗಳಿಗೆ ಹಣ ಸಂಗ್ರಹಿಸಲು ಅಭಿಯಾನ

 | 
Anuska and Virat kohli

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿ ಅವರು ಆಸ್ಟ್ರೇಲಿಯಾದ ಕ್ರಿಕೆಟ್ ಆಟಗಾರ ಪ್ಯಾಟ್ ಕಮ್ಮಿನ್ಸ್ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಹಾದಿಯನ್ನೇ ಹಿಡಿದಿದ್ದಾರೆ. ಐಪಿಎಲ್ ರದ್ದಾದ ಹಿನ್ನೆಲೆ ಮುಂಬೈಗೆ ಬಂದಿರುವ ಅವರು ಕೋವಿಡ್ ಪರಿಹಾರ ಕಾರ್ಯಗಳಿಗಾಗಿ ಹಣ ಸಂಗ್ರಹಿಸಲು ಮುಂದಾಗಿದ್ದಾರೆ.

ವಿರಾಟ್ ಕೊಹ್ಲಿಯ ಜೊತೆ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಅವರು ಕೈ ಜೋಡಿಸಿದ್ದು ದೇಶದಲ್ಲಿ ಕೊರೋನಾ ಸೋಂಕಿತರ ನೆರವಿಗಾಗಿ ಕೋವಿಡ್ ಪರಿಹಾರ ಕಾರ್ಯಗಳಿಗಾಗಿ ಹಣ ಸಂಗ್ರಹಿಸಲು ಮುಂದಾಗಿದ್ದಾರೆ.

ಕೋವಿಡ್ 19 ಪರಿಹಾರ ಕಾರ್ಯಕ್ಕಾಗಿ ಹಣ ಸಂಗ್ರಹಿಸಲು ನಾನು ಮತ್ತು ಅನುಷ್ಕಾ ಕೆಟ್ಟೋ ಮೂಲಕ ಅಭಿಯಾನ ಆರಂಭಿಸಿದ್ದೇವೆ. ನಿಮ್ಮ ಬೆಂಬಲಕ್ಕೆ ನಮ್ಮ ಕೃತಜ್ಞತೆಗಳು, ಎಲ್ಲರೂ ಒಂದಾಗಿ ನಮ್ಮ ಸುತ್ತಮುತ್ತ ಸಂಕಷ್ಟಕ್ಕೆ ಸಿಲುಕಿರುವವರಿಗೆ ಸಹಾಯ ಮಾಡಿ. ನಮ್ಮ ಜೊತೆ ಈ ಅಭಿಯಾನಕ್ಕೆ ಕೈಜೋಡಿಸಬೇಕೆಂದು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.

ಈ ಅಭಿಯಾನದ ಮೂಲಕ ವೊರಾಟ್ ಕೋಹ್ಲಿ ಮತ್ತು ಅನುಷ್ಕಾ ದಂಪತಿಗಳು 7 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲು ಮುಂದಾಗಿದ್ದು, ಎರಡು ಕೋಟಿ ರೂಪಾಯಿಗಳನ್ನು ದಾನ ನೀಡಿದ್ದಾರೆ.